ಬೆಂಗಳೂರಿನ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಹೈದರ್ ಅಲಿ ಅವರ ಸ್ನೇಹಿತನಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಅಶೋಕ ನಗರ ಠಾಣೆ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಹೈದರ್ ಅಲಿಯನ್ನು ಕೂಡಲೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಅಷ್ಟರಲ್ಲಾಗಲೇ ಹೈದರ್ ಅಲಿ ಮೃತಪಟ್ಟಿದ್ದರು.

ವಿಚಾರ ತಿಳಿದು ಹೈದರ್​ ಅಲಿಯ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಲಾಂಗು, ಮಚ್ಚು ಹಿಡಿದು ಜಮಾಯಿಸಿದರು. ಬೌರಿಂಗ್ ಆಸ್ಪತ್ರೆ ಗೇಟ್ ತಳ್ಳಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿದ್ದ ಅಶೋಕನಗರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!