ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ ಎನ್ನುವವರನ್ನು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಅಣ್ಣಪ್ಪ ಬಸಪ್ಪ ನಿಂಬಾಳರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಘಟನೆ ನಡೆದಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಹಣಕಾಸಿನ ವಿಷಯವಾಗಿ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.