ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಇಂದು ಮುಂಜಾನೆ ಮಹಾರಾಷ್ಟ್ರದ ಪುಣೆಯ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪುಣೆ ಮೂಲದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ವ್ಯಕ್ತಿ. ಕಾರವಾರ ತಾಲೂಕಿನ ಹಣಕೊಣ ಗ್ರಾಮದ ಮನೆಯೊಂದರಲ್ಲಿ ಮುಂಜಾನೆ ಈ ಘಟನೆ ನಡೆದಿದೆ.
ಮುಂಜಾನೆ ಏಕಾಏಕಿ ಅಪರಿಚಿತರು ಬಂದು ವಿನಾಯಕ್ ದಂಪತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂತ್ರಸ್ತೆಯನ್ನು ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕೊಲೆ ಮಾಡಿದವರು ಯಾರು ಮತ್ತು ಏಕೆ? ಎಂಬುದು ಇನ್ನಷ್ಟೇ ತಿಳಿದುಕೊಳ್ಳಬೇಕಾಗಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.