ಮಹಿಳೆಯ ಬರ್ಬರ ಹತ್ಯೆ: ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್ ನಲ್ಲಿಟ್ಟು ಆರೋಪಿ ಎಸ್ಕೇಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ನಡೆದಿದೆ.

ಇಲ್ಲಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ.

ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿ ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!