ಬಾರಿ ಎಡ್ಡೆ ಗೊಬ್ಬಿಯ ಸೂರ್ಯ: ರಾಹುಲ್ ಮಾತು ಕೇಳಿ ಖುಷಿ ಪಟ್ಟ ದೀವಿಶಾ ಶೆಟ್ಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶ್ರೀಲಂಕಾ ವಿರುದ್ಧ ನಿನ್ನೆ ಅಬ್ಬರದ ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾದ ಆಟಗಾರ ಸೂರ್ಯಕುಮಾರ್ ಯಾದವ್ ಆಟಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಫಿದಾ ಆಗಿದ್ದಾರೆ.

‘ಬಾರಿ ಎಡ್ಡೆ ಗೊಬ್ಬಿಯ ಸೂರ್ಯ’ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದ ಮೂಲಕ ತುಳು ಭಾಷೆಯಲ್ಲಿ (Tulu) ಪ್ರಶಂಸಿದ್ದಾರೆ .

ಈ ಪೋಸ್ಟ್‌ಗೆ ಸೂರ್ಯ ಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕಾಮೆಂಟ್ ಮಾಡಿದ್ದೂ, ಅವರಿಗೆ ತುಳು ಕಲಿಸುವಂತೆ ಮನವಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ಮಿಸ್ಟರ್ 360 ಡಿಗ್ರಿ ಪ್ಲೇಯರ್ ಖ್ಯಾತಿಯ ಸೂರ್ಯ ತನ್ನ ಸ್ಫೋಟಕ ಆಟ ಆಡಿದ್ದರು. ಬೌಂಡರಿ, ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯನ ಆಟ ಕಂಡು ಅಭಿಮಾನಿಗಳು ದಂಗಾಗಿದ್ದರು.

ಈ ಆಟ ಕಂಡ ಮಂಗಳೂರು ಮೂಲದ ಕೆ.ಎಲ್ ರಾಹುಲ್ ಬಾರಿ ಎಡ್ಡೆ ಗೊಬ್ಬಿಯ ಸೂರ್ಯ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೂಲಭಾಷೆ ತುಳುವಿನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ಸೂರ್ಯಕುಮಾರ್ ಯಾದವ್ ಅವರ ಪತ್ನಿ ಕರಾವಳಿ ಮೂಲದವರಾದ ದೀವಿಶಾ ಶೆಟ್ಟಿ, ಚೂರ್ ತುಳು ಕಲ್ಪಾವೊಡು ಆರೆಗ್ ನನ (ಇನ್ನು ಸ್ವಲ್ಪ ತುಳು ಕಲಿಸಬೇಕು ಅವರಿಗೆ) ಎಂದು ರಾಹುಲ್ ಪೋಸ್ಟ್‌ಗೆ ಕಾಮೆಂಟ್ ಹಾಕಿ ಮಾಡಿದ್ದಾರೆ.

ಈ ಪೋಸ್ಟ್ ಇದೀಗ ತುಳುನಾಡಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಹುಲ್ ಮತ್ತು ದೀವಿಶಾ ಅವರ ತುಳು ಪ್ರೇಮಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ಅವರ ಮಗಳು ತುಳುವಿನಲ್ಲಿ ಮಾತನಾಡುವ ವೀಡಿಯೋ ಒಂದು ವೈರಲ್ ಆಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!