ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಚೆನ್ನೈನಲ್ಲಿ ಅಧಿಕ ಮಳೆ, ಕಷ್ಟದ ಜೀವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ  ಮಳೆಯಾಗುತ್ತಿದೆ. ಮಳೆಯ ಪರಿಣಾಮ ಚೆನ್ನೈ ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಜೆ ಘೋಷಿಸಿದ್ದಾರೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ. ಈ ಜಿಲ್ಲೆಗಳ ಐಟಿ ಕಂಪನಿಗಳ ಉದ್ಯೋಗಿಗಳಿಗೆ ಅಕ್ಟೋಬರ್ 15 ರಿಂದ 18ರವರೆಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವ ಸಲಹೆಯನ್ನು ನೀಡುವಂತೆ ಅಧಿಕಾರಿಗಳಿಗೆ ಸ್ಟಾಲಿನ್ ಸೂಚನೆ ನೀಡಿದ್ದಾರೆ.

ಮಳೆಯಾಗುತ್ತಿರುವ ಭಾಗಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಹಾಯವಾಣಿ ಆರಂಭಿಸಿದೆ. ಸಹಯಾಕ್ಕಾಗಿ 1070, ಜಿಲ್ಲಾ ಸಹಾಯವಾಣಿ 1077, ವಾಟ್ಸಪ್‌ ಸಂಖ್ಯೆ 9445869848ಕ್ಕೆ ಸಂಪರ್ಕಿಸಲು ಕೋರಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!