ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಅ.23 ರಂದು ಅಪ್ಪಳಿಸಲಿದೆ ‘ದಾನಾ’ ಚಂಡಮಾರುತ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ ‘ದಾನಾ’ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

ಪೂರ್ವ- ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಇದು ‍ಪಶ್ಚಿಮ- ವಾಯುವ್ಯ ದಿಕ್ಕಿನೆಡೆಗೆ ಚಲಿಸುವ ಸಾಧ್ಯತೆ ಇದೆ. ಅ.23ರಂದು ಒಡಿಶಾ, ಪೂರ್ವ- ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಇದೆ. ನಂತರ ಚಂಡಮಾರುತವು ವಾಯುವ್ಯಕ್ಕೆ ಚಲಿಸುವ ಸಾಧ್ಯತೆ ಇದ್ದು, ಅ.24ರ ಮುಂಜಾನೆ ಒಡಿಶಾ- ಪಶ್ಚಿಮ ಬಂಗಾಳ ಕರಾವಳಿಯಿಂದ ವಾಯುವ್ಯ ಬಂಗಾಳಕೊಲ್ಲಿಯನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!