ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಇಂದು ಸಹ ಬೆಂಗಳೂರು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಹವಾಮಾನ ಇಲಾಖೆಯಿಂದ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.