ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗಗಳಾದ ಉಡುಪಿ, ಉತ್ತರ ಕನ್ನಡ, ಮಂಗಳೂರು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.