ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುಭಾರ ಕುಸಿತದಿಂದ ರಾಜ್ಯದ ವಿವಿದೆಡೆ ಮಳೆಯಾಗುತ್ತಿದ್ದು, ಬೆಂಗಳೂರು, ತುಮಕೂರು, ಮಂಡ್ಯ, ಕೋಲಾರ ಮತ್ತು ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯಾಗಿದೆ.
ಗುರುವಾರ ಮುಂಜಾನೆಯಿಂದಲೇ ಮೋಡ ಮುಸುಕಿದ ವಾತಾವರಣ ಜತೆಗೆ ಅಗಾಗ್ಗೆ ಜೋರಾಗಿ ಮಳೆ ಸುರಿಯಿತು. ಇದರಿಂದ ಜನಜೀವನ ಅಸ್ತವ್ಯಸ್ತವಾಗಿದೆ.
ಅಂಡಮಾನ್‌ನಲ್ಲಿ ಉಂಟಾಗಲಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ನ.27ರಿಂದ ಮಳೆ ಮತ್ತಷ್ಟು ಬಿರುಸುಗೊಳ್ಳಲಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಹಾಸನ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಸೇರಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ.