ಪಿಎಸ್ಐ ನೇಮಕಾತಿಗೆ ತಡೆ: ಅಧ್ಯಯನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ

ಹೊಸದಿಗಂತ ವರದಿ, ಕಲಬುರಗಿ:

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.
ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸದರಿ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು.
ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!