ಹೊಸದಿಗಂತ ವರದಿ, ಬಸವಕಲ್ಯಾಣ:
ಇಂದು ಬೆಳಗ್ಗೆಯಿಂದ ವಿಧಾನಸಭಾ ಉಪಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಮುಂಜಾನೆ 7 ಗಂಟೆಯಿಂದ 9 ಗಂಟೆಯವರೆಗೆ ಶೇ.7.46 ರಷ್ಟು ಮತದಾನ ನಡೆದಿದೆ.
ಮತದಾರರು ಬೆಳಗ್ಗೆಯೇ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿರುವುದು ಕಂಡು ಬಂದಿದೆ. ಕೊರೋನಾ ಸೋಂಕು ಹೆಚ್ಚಾಗಿರುವುದರಿಂದ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲಾದ್ಯಂತ 326 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 95 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ. ಇಂದು ಒಟ್ಟು 12 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.