Sunday, March 26, 2023

Latest Posts

ಬಸವನಗುಡಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯು. ಬಿ. ವೆಂಕಟೇಶ್‌ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಬಸವನಗುಡಿ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದು, ಈ ಬಾರಿ ವಿಧಾನ ಪರಿಷತ್‌ ಸದಸ್ಯ ಯು.ಬಿ. ವೆಂಕಟೇಶ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಸದ್ಯ ಬಿಜೆಪಿಯ ಭದ್ರನೆಲೆಯಾಗಿ ಬದಲಾಗಿರುವ ಈ ಕ್ಷೇತ್ರವನ್ನು ಮರಳಿ ವಶಪಡಿಸಿಕೊಳ್ಳಲು ಕಾಂಗ್ರೆಸ್‌ ಸಿದ್ಧತೆ ನಡೆಸಿದ್ದು, ಈ ನಿಟ್ಟಿನಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಅಂತಿಮಗೊಳಿಸಲಾಗಿದೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅರವ ಸಮ್ಮುಖದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಯು.ಬಿ. ವೆಂಕಟೇಶ್‌ ಅವರನ್ನು ಕಣಕ್ಕಿಳಿಸುವ ಕುರಿತು ತೀರ್ಮಾನಿಸಲಾಗಿತ್ತು ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಪಕ್ಷದ ಆಕಾಂಕ್ಷಿಯಾಗಿ ಈಗಾಗಲೇ ಇಡೀ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ಕೆಪಿಸಿಸಿ ವಕ್ತಾರ ಡಾ. ಶಂಕರ ಗುಹಾ ದ್ವಾರಕನಾಥ್‌ ಅವರೂ ವೆಂಕಟೇಶ್‌ಗೆ ಎಲ್ಲ ರೀತಿಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪಕ್ಷದ ಸಂಘಟನೆಯಲ್ಲಿ ತೊಡಗಿರುವ ಡಾ. ಶಂಕರ ಗುಹಾ ಅವರಿಗೆ ಮುಂದೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡುವುದಾಗಿ ಪಕ್ಷದ ನಾಯಕರು ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರು ಹಿಂದೆ ಸರಿದು ಯು ಬಿ ವೆಂಕಟೇಶ್‌ ಅವರ ಆಯ್ಕೆಗೆ ಸಹಮತ ವ್ಯಕ್ತಪಡಿಸಿದರೆಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!