ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಬಸವನಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸುವ ಕಡಲೆಕಾಯಿ ಪರಿಷೆಗೆ ಈಗಾಗಲೇ ಅಧಿಕೃತ ಚಾಲನೆ ಸಿಕ್ಕಿದೆ.
ಕಡಲೆಕಾಯಿ ಪರಿಷೆ ಇತಿಹಾಸದಲ್ಲಿ ಇದೇ ಮೊದಲನೆಯ ಬಾರಿಗೆ ಹಾಕಿರುವ ಸುಮಾರು 4-5 ಸಾವಿರ ಅಂಗಡಿಗಳಿಗೆ ಶುಲ್ಕ ರಹಿತವಾಗಿ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಮೊದಲನೆಯ ಬಾರಿಗೆ ರಾಮಕೃಷ್ಣ ಆಶ್ರಮ ವೃತ್ತ ಗಣೇಶ ಭವನ್ ವೃತ ಹಾಗೂ ಸುತ್ತುಮುತ್ತಲಿನ ರಸ್ತೆಗಳೆಲ್ಲ ವಿಜೃಂಭಣೆಯ ದೀಪಾಲಂಕಾರ ಮಾಡಲಾಗಿದೆ. ಇಂದು ಸಂಜೆ 6:15ಕ್ಕೆ ಕೆಂಪಾಬುದಿ ಕೆರೆಯಲ್ಲಿ ವಿಶೇಷ ತೆಪ್ಪೋತ್ಸವ ನಡೆಯಲಿದೆ. ಬಸವಣ್ಣನ ದರ್ಶನಕ್ಕೆ ಬರುವ ಸಾರ್ವಜನಿಕರಿಗೆ ವಿಶೇಷ ಸಾಲಿನ ದರ್ಶನ ವ್ಯವಸ್ಥೆ ಹಾಗೂ ಹಿರಿಯರಿಗೆ ವಿಶೇಷ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿದೆ.