ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 2 ತಿಂಗಳು ಕಳೆದರು ಇನ್ನೂ ಬಿಜೆಪಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ.
ಹೀಗಾಗಿ ಪ್ರತಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಅಂತಿಮ ಕಸರತ್ತು ಬಿಜೆಪಿ ವಲಯದಲ್ಲಿ ನಡೆಯುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಬೊಮ್ಮಾಯಿ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಮಾತುಕತೆ ನಡೆಯಲಿದೆ. ಬೊಮ್ಮಾಯಿಗೆ ಬುಲಾವ್ ನೀಡಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಹೊಸ ಸಂಚಲನ ಶುರುವಾಗಿದೆ.