ದೆಹಲಿಯಲ್ಲಿ ಬಸವರಾಜ ಬೊಮ್ಮಾಯಿ: ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಬಂದೆ ಎಂದ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೈಕಮಾಂಡ್ ಬುಲಾವ್ ಹಿನ್ನೆಲೆ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದೆಹಲಿಗೆ ಭೇಟಿ ನೀಡಿದ್ದು,ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿದ್ದೇವೆ. ನಮ್ಮ ಸಂಸದರು ಮನವಿ ಮಾಡಿದ್ದ ಹಿನ್ನೆಲೆ ಚರ್ಚಿಸಲು ಬಂದಿದ್ದೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಪ್ರಯತ್ನ ಮಾಡಿದೆ. ಸಂಸತ್ ಕಲಾಪ ಹಿನ್ನೆಲೆ ಅಮಿತ್ ಶಾ ಭೇಟಿಯಾಗಲು ಆಗುತ್ತಿಲ್ಲ. ಆದರೆ ಭೇಟಿಗೆ ಪ್ರಯತ್ನ ಮಾಡುತ್ತೇನೆ ಎಂದರು.

ಸೂಕ್ತ ನಿರ್ಣಯವನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳಬೇಕು. ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ. ಬಿಜೆಪಿ ರಾಷ್ಟ್ರೀಯ ಪಕ್ಷ ಆಗಿದ್ದರಿಂದ ಸೋಲು-ಗೆಲುವು ಸಹಜ. ರಾಜ್ಯ ನಾಯಕರ ಮೇಲೆ ಬೇಸರ ಮಾಡಿಕೊಳ್ಳುವುದು ಏನೂ ಇಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 22 ಸ್ಥಾನ ಗೆಲ್ಲುವುದು ಕನಸಿನ ಮಾತು. 1996 ರಿಂದ ಲೋಕಸಭೆಯಲ್ಲಿ ಕಾಂಗ್ರೆಸ್ ದೊಡ್ಡ ಪ್ರಮಾಣದಲ್ಲಿ ಗೆದ್ದಿಲ್ಲ. 2018ರಲ್ಲಿ ರಾಜ್ಯದಲ್ಲಿ ನಾವು ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ. ಆಗ ನಾವು ರಾಜ್ಯದಲ್ಲಿ ಅಧಿಕಾರದಲ್ಲಿ ಇರದಿದ್ದರೂ ಹೆಚ್ಚುಸ್ಥಾನ ಗೆಲುವು ಸಾಧಿಸಿದ್ದೇವೆ ಎಂದರು.

25 ಸ್ಥಾನಗಳನ್ನು ಉಳಿಸಿಕೊಳ್ಳಲು ನಾವು ತಯಾರಿ ಮಾಡಿಕೊಳ್ಳುತ್ತೇವೆ. ರಾಷ್ಟ್ರೀಯ ಅಧ್ಯಕ್ಷರನ್ನು ನಾಳೆ ಭೇಟಿ ಮಾಡುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!