spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸವರಾಜ್ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಕೂಡಿಬಂದಿದೆ: ಸಿ.ಟಿ.ರವಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ವರದಿ, ಚಿಕ್ಕಮಗಳೂರು:

ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮತೋಲನ ಎರಡನ್ನೂ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೆರಡು, ಮೂರುದಿನಗಳಲ್ಲಿ ಸಂಪುಟ ರಚಿಸುವುದಾಗಿ ಹೇಳಿದ್ದಾರೆ. ಅವರು ಒಳ್ಳೆಯ ಕೆಲಸ ಮಾಡುತ್ತಾರೆ. ಮತ್ತೆ ಅವರ ನೇತೃತ್ವದಲ್ಲೇ ಚುನಾವಣೆ ಗೆದ್ದು ಬರುತ್ತೇವೆ. ಆ ನಂಬಿಕೆ ನಮಗೂ ಇದೆ ಎಂದರು.
ಸಿಎಂ ರೇಸ್‍ನಲ್ಲಿ ತಮ್ಮ ಹೆಸರೂ ಸಹ ಕೇಳಿ ಬಂದಿತ್ತಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಸುಮಾರು ಹದಿನೈದು ದಿನಗಳ ಕಾಲ ನಿರಂತರವಾಗಿ ಮಧ್ಯಮಗಳಲ್ಲಿ ನನ್ನದೂ ಸೇರಿ ಸುಮಾರು ಜನರ ಹೆಸರು ಕೇಳಿ ಬರುತ್ತಿತ್ತು. ಆದರೆ ಯೋಗವೂ ಇರಬೇಕಲ್ಲವೇ? ದಿವಂಗತ ಅನಂತ್ ಕುಮಾರ್ ಯಾವಾಗಲೂ ಬಾರದು ಬಪ್ಪದು, ಬಪ್ಪದು ತಪ್ಪದು ಎಂದು ಹೇಳುತ್ತಿದ್ದರು. ಹಾಗೆ ಈ ಬಾರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಕೂಡಿಬಂದಿದೆ ಎಂದರು.
ಅವರಿಗೆ ಎಲ್ಲಾ ರೀತಿಯ ಸಹಕಾರವನ್ನೂ ಕೊಡುತ್ತೇವೆ. ಅವರು ನಮ್ಮ ಸ್ನೇಹಿತರು, ಒಡನಾಡಿಗಳು, ಹಾಗಾಗಿ ರಾಜ್ಯದ ಹಿತಕ್ಕಾಗಿ ಮಾಡುವ ಎಲ್ಲಾ ಕೆಲಸಕ್ಕೆ ಹಾಗೂ ಅಭಿವೃದ್ಧಿ ಕಾರ್ಯಕ್ಕೆ ಸದಾ ಕಾಲ ಸಹಕಾರ ಇದ್ದೇ ಇರುತ್ತದೆ ಎಂದರು.
ಮೇಕೆದಾಟು ಯೋಜನೆಯನ್ನು ಎರಡೂ ರಾಜ್ಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಅನುಷ್ಟಾನಕ್ಕೆ ತರಬೇಕು. ನಮ್ಮದು ಭಾರತ, ಪಾಕಿಸ್ತಾನವಲ್ಲ, ಬೆಂಗಳೂರಿಗೆ ಕುಡಿಯುವ ನೀರು ಕೊಡುವುದು ಎಂದರೆ ಅಲ್ಲಿ ಶೇ.30 ರಷ್ಟು ತಮಿಳಿಗರೇ ಇದ್ದಾರೆ. ದೇಶದ ತುಂಬೆಲ್ಲಾ ಇರುವ ಜನರು ಬೆಂಗಳೂರಿನಲ್ಲಿದ್ದಾರೆ. ಹೀಗಿರುವಾಗ ಕನ್ನಡಿಗರಿಗೆ ಮಾತ್ರ ಕುಡಿಯುವ ನೀರಲ್ಲ. ಅದೊಂದು ಕಾಸ್ಮೋಪಾಲಿಟನ್ ಸಿಟಿ ಎಂದರು.
ಈ ಕಾರಣಕ್ಕೆ ಎರಡೂ ರಾಜ್ಯಕ್ಕೆ ಅನುಕೂಲವಾಗುವ ರೀತಿ ಮಧ್ಯಮ ಮಾರ್ಗದಲ್ಲಿ ಯೋಜನೆಯನ್ನು ಮಾಡಬೇಕು. ಈ ವಿಷಯದಲ್ಲಿ ರಾಜಕಾರಣ ಮಾಡದೆ ವಾಸ್ತವಿಕ ನೆಲೆಯಲ್ಲಿ ಯೋಚನೆ ಮಾಡಿ ಎಂದು ಎರಡೂ ರಾಜ್ಯದ ಮುಖ್ಯಮಂತ್ರಿಗಳನ್ನೂ ಮನವಿ ಮಾಡುತ್ತೇವೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss