ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ 20ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದು, ನಾಳೆ ಮಧ್ಯಾಹ್ನ 3.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲರು ಅಧಿಕಾರ ಗೋಪ್ಯತೆಯ ಪ್ರಮಾಣ ಬೋಧಿಸಲಿದ್ದಾರೆ.
ಶಿಗ್ಗಾಂವಿ ಕ್ಷೇತ್ರದ ಶಾಸಕರೂ ಆಗಿರುವ ಬೊಮ್ಮಾಯಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು. ಈ ಮೂಲಕ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಗೊಂದಲಕ್ಕೆ ತೆರೆ ಬಿದ್ದಿದೆ.