August 7, 2026
Friday, August 7, 2026
spot_img

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಾಕಷ್ಟು ರಾಜಕೀಯ ಬೆಳವಣಿಗೆಗಳ ನಂತರ ಇದೀಗ ಕರ್ನಾಟಕ ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷರ ಜತೆ ನಿರಂತರ ಮಾತುಕತೆ ನಂತರ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು.ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮೇಲ್ಮನೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಬಲ ಹೆಚ್ಚಿರುವುದರಿಂದ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರನ್ನು ಕಾಂಗ್ರೆಸ್ ವರಿಷ್ಠರು ಈಗಾಗಲೇ ಅಂತಿಮಗೊಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !