ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಸಂಚಲನ ಸೃಷ್ಠಿಸಿದ ಬೆನ್ನಲ್ಲೇ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿರಾಜೀನಾಮೆ ನೀಡಿದ್ದಾರೆ.
ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ರವಾನಿಸಿದ್ದು, ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹಾಗಾಗಿ, ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಸವರಾಜ ಹೊರಟ್ಟಿ ಇಂದು (ಮಾರ್ಚ್ 23) ಬೆಳಗ್ಗೆ ಅಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಈಗಾಗಲೇ ಅವರು ರಾಜೀನಾಮೆ ಪತ್ರವನ್ನು ಉಪಸಭಾಪತಿಗೆ ರವಾನಿಸಿರುವುದು ಬೆಳಕಿಗೆ ಬಂದಿದೆ.
ಮಾರ್ಚ್ 18ರಂದೇ ಹೊರಟ್ಟಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಾಣೇಶ್ ಅವರಿಗೆ ಕಳುಹಿಸಿದ್ದು, ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೊರಟ್ಟಿ ತಮ್ಮ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.