spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಅಧಿಕೃತ ಆದೇಶ ಹೊರಡಿಸಿದ ಬಸವರಾಜ ಬೊಮ್ಮಾಯಿ!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಸವರಾಜ ಬೊಮ್ಮಾಯಿ‌ ಮೊದಲ ಅಧಿಕೃತ ಆದೇಶ ಪ್ರಕಟಿಸಿದ್ದಾರೆ. ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡುತ್ತಿರುವ ಮಾಸಾಶನಗಳನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಸವರಾಜ ಬೊಮ್ಮಾಯಿ ಜನಪರ ಆಡಳಿತದ ಭರವಸೆ ನೀಡಿದ್ದರು. ರೈತ ಮಕ್ಕಳಿಗೆ ಶಿಕ್ಷಣ ವೇತನ ಸಹಿತ ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ವಿಧವಾ ವೇತನದ ಮೊತ್ತವನ್ನು ಏರಿಕೆ ಮಾಡುವುದಾಗಿ ಘೋಷಿಸಿದ್ದರು. ಸಂಧ್ಯಾ ಸುರಕ್ಷಾ ಯೋಜನೆ ಮೊತ್ತ ಸದ್ಯ 1000 ರೂಪಾಯಿ ಇದೆ. ಅದನ್ನು 1200 ರೂಪಾಯಿಗೆ ಏರಿಕೆ ಮಾಡಲಾಗುವುದು. ಹಾಗೂ ವಿಧವಾ ವೇತನ ಮಾಸಿಕ 600 ರೂಪಾಯಿ ಇತ್ತು. ಅದನ್ನು 800 ರೂಪಾಯಿಗೆ ಏರಿಕೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಇಂದು ಅವರು ಈ ಘೋಷಣೆಗಳನ್ನು ಈಡೇರಿಸುವಂತೆ ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss