ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಹಾವೇರಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಟು ಮಾಡಿದ್ದಾರೆ.
ಹಾವೇರಿಯ ಶಿಗ್ಗಾವಿಯಲ್ಲಿರುವ ಬೊಮ್ಮಾಯಿ ಅವರ ಮನೆಯ ವರಾಂಡವನ್ನೇ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮಾರ್ಪಾಡು ಮಾಡಿ, 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಆಮ್ಲಜನಕದ ವ್ಯವಸ್ಥೆ ಕೂಡ ಇದೆ. ರೋಗಿಗಳಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿಯ ನೇಮಕ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಸಚಿವರೊಬ್ಬರ ತಮ್ಮ ಮನೆಯನ್ನೇ ಕೋವಿಡ್ ಕೇರ್ ಕೇಂದ್ರ ಮಾಡಿರುವುದು.
ಬೊಮ್ಮಾಯಿ ಅವರ ಕುಟುಂಬ ಹುಬ್ಬಳ್ಳಿಯಲ್ಲಿ ವಾಸವಿದ್ದು, ಕ್ಷೇತ್ರಕ್ಕೆ ಭೇಟಿ ನೀಡಿದಾಗ ಮಾತ್ರ ಶಿಗ್ಗಾವಿ ಮನೆಯಲ್ಲಿರುವುದಾಗಿ ತಿಳಿಸಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟಕ್ಕೆ ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಟು ಮಾಡಲಾಗಿದೆ. ಅಲ್ಲಿ 50 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ.
ಶಿಗ್ಗಾವಿ ತಾಲ್ಲೂಕು ಆಸ್ಪತ್ರೆ ಮಾಡಿಕೊಂಡಿರುವ ಸಿದ್ಧತೆಗಳನ್ನು ಇಂದು ಪರಿಶೀಲಿಸಲಾಯಿತು. pic.twitter.com/tylfMTSOfO— Basavaraj S Bommai (@BSBommai) May 13, 2021