ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಬಿಡು ಬಿಟ್ಟಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಸಂಸತ್ತಿನಲ್ಲಿ ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ, ಕರ್ನಾಟಕದಲ್ಲಿ ಬಿಜೆಪಿಗೆ ರಾಜ್ಯಾಧ್ಯಕ್ಷ ಮತ್ತು ರಾಜ್ಯದ ವಿರೋಧ ಪಕ್ಷದ ನಾಯಕರನ್ನು ಕೂಡಲೇ ನೇಮಿಸುವಂತೆ ಮನವಿ ಮಾಡಿದರು.
ಸಂಸತ್ ಅಧಿವೇಶನದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನಡ್ಡಾ ಬೊಮ್ಮಾಯಿ ಅವರಿಗೆ ಭರವಸೆ ನೀಡಿದರು ಎನ್ನಲಾಗಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಅನ್ನು ಎದುರಿಸಲು ಬಿಜೆಪಿಯ ಕಾರ್ಯತಂತ್ರ ಏನು ಎಂದು ನಡ್ಡಾ ಮತ್ತು ಬೊಮ್ಮಾಯಿ ಚರ್ಚಿಸಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದರು.