ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಲೋಕಸಭಾ ಕ್ಷೇತ್ರದಿಂದಸಂಸದರಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಯವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಂಸತ್ ಸದಸ್ಯರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರಾಜು, ಜಿಟಿ ದೇವೇಗೌಡ ಹಾಗೂ ಭೋಜೇ ಗೌಡ ಸಾಥ್ ನೀಡಿದರು. ರಾಜೀನಾಮೆ ಸ್ವೀಕಾರ ಮಾಡಿದ ಸ್ಪೀಕರ್ ಖಾದರ್ ಅವರು ಬೊಮ್ಮಾಯಿಯವರಿಗೆ ಶುಭಕೋರಿದರು.