ಹಾವೇರಿಯ ಹುಕ್ಕೇರಿ ಮಠಕ್ಕೆ ಬಸವರಾಜ ಬೊಮ್ಮಾಯಿ ಭೇಟಿ, ನಾಮಪತ್ರ ಸಲ್ಲಿಕೆ

ಹೊಸದಿಗಂತ ಹಾವೇರಿ:

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ, ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಹಾವೇರಿಯಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಬೃಹತ್ ಮೆರವಣಿಯಲ್ಲಿ ನಾಮಪತ್ರ ಸಲ್ಲಿಸಲು ತೆರಳಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಂಸದ ಶಿವಕುಮಾರ ಉದಾಸಿ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಬಿ.ಸಿ.ಪಾಟೀಲ್, ಚಿತ್ರನಟಿ ತಾರಾ, ಮಾಜಿ ಶಾಸಕರಾದ ಅರುಣ್ ಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!