ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಿಲೆಟಿನ್ ಸ್ಫೋಟ ಸಂಭವಿಸಿದ ಚಿಕ್ಕಬಳ್ಳಾಪುರ ತಾಲೂಕಿನ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳವನ್ನು ಸಚಿವರೇ ಖುದ್ದಾಗಿ ಪರಿಶೀಲನೆ ನಡೆಸಿ, ಗಣಿ, ಪೊಲೀಸ್ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆಗೆ ಕಾರಣಗಳೇನು? ರಾತ್ರಿ ವೇಳೆ ಈ ಅಜಾಗರೂಕತೆ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದರು.
ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.