ಹಾವೇರಿಯಲ್ಲಿ ನಾಮಪತ್ರ ಸಲ್ಲಿಸಿದ ಬಸವರಾಜ ಬೊಮ್ಮಾಯಿ

ದಿಗಂತ ವರದಿ ಹಾವೇರಿ:

ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ (BJP) ಅಭ್ಯಥಿ೯ಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಎರಡು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂತಿ೯ ನಾಮಪತ್ರ ಸ್ವೀಕರಿಸಿದರು.

ಅದೇ ರೀತಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ, ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಚೆಕಣ್ಣನ್, ಎಸ್ ಯುಸಿಐ (ಕಮ್ಯೂನಿಸ್ಟ್‌) ಪಕ್ಷದಿಂದ ಗಂಗಾಧರ ಬಡಿಗೇರ ತಲಾ ಒಂದೊಂದು ನಾಮಪತ್ರಗಳನ್ನು ಜಿಲ್ಲಾ ಚುನಾವಣಾಧಿಕಾರಿಗೆ ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಉಪಸ್ಥಿತರಿದ್ದರು.

ಸೋಮವಾರ ೪ ಅಭ್ಯರ್ಥಿ ಗಳು ಐದು ನಾಮಪತ್ರ ಸಲ್ಲಿಸಿದ್ದು, ಒಟ್ಟು ೫ ಅಭ್ಯರ್ಥಿ ಗಳಿಂದ ಆರು ನಾಮಪತ್ರ ಸಲ್ಲಿಸಿದಂತಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!