ಕುಟುಂಬ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ಬಸವರಾಜ ಹೊರಟ್ಟಿ

ಹೊಸದಿಗಂತ ವರದಿ ಹುಬ್ಬಳ್ಳಿ: 

ಹುಬ್ಬಳ್ಳಿಯ ಸ್ಟೇಷನ್ ರಸ್ತೆ ಲ್ಯಾಮಿಂಗ್ಟನ್ ಶಾಲೆಗೆ ಭೇಟಿ ನೀಡಿದ ಕುಟುಂಬ ಸಮೇತ ಭೇಟಿ ನೀಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ ಚಲಾಯಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜಕೀಯ ವ್ಯವಸ್ಥೆ ನೋಡಿದರೆ ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದ ಪರಿಸ್ಥಿತಿ ಎದುರಾಗಿದೆ ಎಂದರು.

ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುತ್ತಿರುವ ಮಾಹಿತಿ ತಿಳಿದು ಬಂದಿದ್ದು, ವಿಷಾದನೀಯ ಸಂಗತಿ ಎಂದರು. ಒಂದೊಂದು ಮತಕ್ಕೆ ಐದು ಸಾವಿರ ಕೊಟ್ಟಿದ್ದಾರೆ ಎಂಬುದು ಗೊತ್ತಾಗಿದೆ. ಕೆಲವು ಮತದಾರರು ಆಮಿಷಕ್ಕೆ ಒಳಗಾಗುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ಈ ರೀತಿ ಆಗಬಾರದು‌ ಎಂದರು.

ಆಸೆ ಆಕಾಂಕ್ಷಿಗಳಿಗೆ ಬಲಿಯಾಗದೆ ಜನರು ಅಭಿವೃದ್ಧಿ ನೋಡಿ ಮತದಾನ ಮಾಡಬೇಕು. ಇವತ್ತಿನ ರಾಜಕಾರಣ ಕುಲಗೆಟ್ಟ ಹೋಗಿದ್ದು, ಅಭಿವೃದ್ಧಿ ಆಧಾರಿತ ರಾಜಕಾರಣ ಮೂಲೆ ಸೇರಿದೆ ಎಂದು ತಿಳಿಸಿದರು.

ಕೇವಲ ಆರೋಪ, ಪ್ರತ್ಯಾರೋಪಗಳಿಗೆ ಪ್ರಚಾರ ಸೀಮಿತ ಆಗಿತ್ತು. ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!