ಬಸವರಾಜ ಹೊರಟ್ಟಿ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಲಿದೆ: ಜಗದೀಶ ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಸಿ.ಎಂ ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಿದ್ದರಿಂದ ತಬ್ಬಲಿಯಾಗಿದ್ದಾರೆ. ಆದರೆ ಬಸವರಾಜ ಹೊರಟ್ಟಿ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿದೆ ಎಂದು ಶಾಸಕ ಜಗದೀಶ ಶೆಟ್ಟರ್ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರೂ, ಅಲ್ಲಿ ಏನೂ ಮಾಡಲಾಗದ ಅಸಹಾಯಕ ಸ್ಥಿತಿಯಿದೆ. ಅವರಿಂದ ಪಕ್ಷದಲ್ಲಿ ಯಾವ ನಿರ್ಧಾರವನ್ನು ಕೈಗೊಳ್ಳಲಾಗುತ್ತಿಲ್ಲ. ವಿಧಾನ ಪರಿಷತ್ ಸದಸ್ಯ ಸ್ಥಾನ ಸಹ ಪಡೆಯಲು ಅವರಿಂದ ಆಗದೆ ಅನಾಥರಾಗಿದ್ದಾರೆ ಎಂದು ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗಿ ತಬ್ಬಲಿಯಾಗಿದ್ದಾರೆ ಎನ್ನುವ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ, ಸಿದ್ದರಾಮಯ್ಯರ ಶಕ್ತಿ ಕೇಂದ್ರದ ಜೊತೆ ಮಲ್ಲಿಕಾರ್ಜುನ ಖರ್ಗೆ ಅವರ ಮತ್ತೊಂದು ಶಕ್ತಿ ಕೇಂದ್ರ ಹುಟ್ಟಿಕೊಂಡಿದೆ. ಪಕ್ಷದಲ್ಲಿ ಕಡೆಗಣನೆಗೆ ಒಳಗಾಗಿದ್ದ ಎಚ್.ಕೆ. ಪಾಟೀಲ, ಕೆ.ಎಚ್. ಮುನಿಯಪ್ಪ, ಜಿ.‌ ಪರಮೇಶ್ವರ ಅವರನ್ನು ಖರ್ಗೆ ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಪಕ್ಷದಲ್ಲಿ ಮತ್ತಷ್ಟು ವೈಮನಸ್ಸು ಹೆಚ್ಚಾಗಿ ಪರಸ್ಪರ ಕಿತ್ತಾಡುವ ಸ್ಥಿತಿಗೆ ತಲುಪಲಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!