ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.
ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.ಅಲ್ಲದೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು.
ತನ್ನ ಅಧಿಕಾರಾವಧಿಯಲ್ಲಿ ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತದೆ ಎಂದರು.
ಬಿಜೆಪಿ ಸೇರ್ಪಡೆ ಸಂಬಂಧಿಸಿದಂತೆ ಯಾವುದೇ ಷರತ್ತು ಹಾಕಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.