Sunday, August 14, 2022

Latest Posts

ಬಾಟ್ಲಾ ಹೌಸ್ ಎನ್ ಕೌಂಟರ್: ಉಗ್ರ ಅರಿಜ್ ಖಾನ್ ಗೆ ಗಲ್ಲು ಶಿಕ್ಷೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಾಟ್ಲಾ ಹೌಸ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಮುಜಾಹಿದ್ದೀನ್ ಸಂಘಟನೆಯ ಉಗ್ರ ಅರಿಜ್ ಖಾನ್ ಗೆ ದೆಹಲಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಎನ್ ಕೌಂಟರ್ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕೊಲೆ ಮತ್ತು ಇತರ ಅಪರಾಧಗಳಲ್ಲಿ ಅರಿಜ್ ಖಾನ್ ನನ್ನು ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿತ್ತು.
ಅರಿಜ್ ಖಾನ್ ಮತ್ತವನ ಸಹಚರರು ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಅವರು ಮೃತಪಟ್ಟಿರುವುದು ಸಾಕ್ಷ್ಯಧಾರಾಗಳಿಂದ ದೃಢಪಟ್ಟಿರುವುದಾಗಿ ಹೆಚ್ಚುವರಿ ಸೆಷನ್ ನ್ಯಾಯಾಧೀಶ್ ಸಂದೀಪ್ ಯಾದವ್ ಹೇಳಿದರು. ಈ ಹಿನ್ನೆಲೆಯಲ್ಲಿ ಅರಿಜ್ ಖಾನ್ ಗೆ ಮರಣದಂಡನೆ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದ್ದರು.
ದಕ್ಷಿಣ ದೆಹಲಿಯ ಜಾಮಿಯಾ ನಗರದಲ್ಲಿ 2008ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್ ಕೌಂಟರ್ ವೇಳೆಯಲ್ಲಿ ದೆಹಲಿಯ ವಿಶೇಷ ವಿಭಾಗದ ಇನ್ಸ್ ಪೆಕ್ಟರ್ ಶರ್ಮಾ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವೊಂದು ಜುಲೈ 2013ರಂದು ಇಂಡಿಯನ್ ಮುಜಾಹಿದ್ದೀನ್ ಉಗ್ರ ಶಹಜಾದ್ ಅಹ್ಮದ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss