ಏಷ್ಯಾಕಪ್ ನಲ್ಲಿ ಸೂಪರ್​ ಫೋರ್ ಗಾಗಿ ಕದನ: ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಏಷ್ಯಾಕಪ್​ನ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿ ಆಗುತ್ತಿದೆ.ಈ ಪಂದ್ಯದ ಫಲಿತಾಂಶದಿಂದ ಬಿ ಗುಂಪಿನಲ್ಲಿ ಯಾರು ಸೂಪರ್​ ಫೋರ್​ಗೆ ಪ್ರವೇಶ ಪಡೆಯುತ್ತಾರೆ ಎಂಬುದು ತಿಳಿದು ಬರಲಿದೆ.

ಟಾಸ್​ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ.

ಏಷ್ಯಾಕಪ್​ನ ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತುಅಫ್ಘಾನಿಸ್ತಾನ ಇದೆ. ಬಾಂಗ್ಲಾದೇಶ, ಶ್ರೀಲಂಕಾದ ವಿರುದ್ಧ ಸೋಲು ಕಂಡಿದ್ದು, ಅಫ್ಘಾನಿಸ್ತಾನದ ಮೇಲೆ ಜಯಿಸಿ 2 ಅಂಕಗಳನ್ನು ಪಡೆದುಕೊಂಡಿದೆ. ಶ್ರೀಲಂಕಾ, ಬಾಂಗ್ಲಾದೇಶವನ್ನು ಮಣಿಸಿರುವ ಭರವಸೆಯಲ್ಲೇ ಇಂದು ಮೈದಾನಕ್ಕಿಳಿದೆ. ಇಂದು ಶ್ರೀಲಂಕಾ ಗೆದ್ದಲ್ಲಿ ಅಫ್ಘಾನಿಸ್ತಾನ ಏಷ್ಯಾಕಪ್​ನ ಸೂಪರ್​ ಫೋರ್​ನಿಂದ ಹೊರ ಬೀಳಲಿದೆ. ಅಫ್ಘಾನಿಸ್ತಾನ ಗೆದ್ದಲ್ಲಿ ರನ್​ ರೇಟ್ ಆಧಾರದಲ್ಲಿ ಯಾರು ಸೂಪರ್​ ಫೋರ್​ ಪ್ರವೇಶ ಪಡೆಯುತ್ತಾರೆ ಎಂಬುದು ತಿಳಿದು ಬರಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!