ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಎಆರ್‌ಒ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬಿಬಿಎಂಪಿ ಎಆರ್‌ಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಪ್ಪ ಖಾತೆ ಬದಲಾವಣೆ ಮಾಡಿಕೊಎಉವ ವಿಚಾರಕ್ಕೆ ಸಂಬಂಧಿಸಿದಂತೆ ವಿ.ಸೋಮಶೇಖರ್ ಎಂಬುವರ ಬಳಿ ಅರವತ್ತು ಸಾವಿರ ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದ.

ಈ ಕುರಿತು ಮುಂಜಾಗ್ರತೆಯಿಂದ ಮೊದಲೇ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಮುಂಚಿತವಾಗಿ 10,000ರೂಪಾಯಿ ಕೊಡುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಚಂದ್ರಪ್ಪ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಸದ್ಯ ಚಂದ್ರಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ.

ಇತ್ತ ಬೆಂಗಳೂರಿನ ಕೆ.ಆರ್‌.ಪುರಂನಲ್ಲಿರುವ ಚಂದ್ರಪ್ಪನ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಿದ್ದು, 5 ಲಕ್ಷ ರೂಪಾಯಿ ನಗದು, ರಾಣೆಬೆನ್ನೂರಿನಲ್ಲಿ 6 ಎಕರೆ ಜಮೀನು, 30×40 ಅಳತೆಯ ನಿವೇಶನ, ಕೆ.ಆರ್.ಪುರಂನಲ್ಲಿ ಮೂರಂತಸ್ತಿನ ಕಟ್ಟಡ ಇರುವ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳಿಂದ ಶೋಧ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!