ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಂಧಿ ಜಯಂತಿ ಪ್ರಯುಕ್ತ ನಾಳೆ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ಆದೇಶ ಹೊರಡಿಸಿದೆ.
ಬಿಬಿಎಂಪಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ‘ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಹೇಳಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಮಾಂಸ ಮಾರಾಟ ಮಾಡದಂತೆ ಇಲಾಖೆ ಸೂಚನೆ ನೀಡಿದ್ದು, ತಪ್ಪಿದಲ್ಲಿ ಪಾಲಿಕೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.