ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದಿ ಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನ ನೀಡಲು ಬಿಬಿಎಂಪಿ ಸಜ್ಜಾಗಿದೆ. ಬಿಬಿಎಂಪಿ ವ್ಯಾಪ್ತಿಯ 10 ಸಾವಿರ ಬೀದಿಬದಿ ವ್ಯಾಪಾರಿಗಳಿಗೆ ಇ-ಸಂತೆ ಹೆಸರಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನ ವಿತರಿಸಲು ರೆಡಿ ಆಗಿದೆ.
ಆದರೆ, ಪಾಲಿಕೆಯ ಈ ಪ್ಲಾನ್ಗೆ ಬೀದಿ ಬದಿ ವ್ಯಾಪಾರಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ನೀಡುತ್ತಿರುವುದಕ್ಕೆ ಖುಷಿ ಇದೆ. ಇತರೆ ಸಮಸ್ಯೆಗಳನ್ನೂ ಬಗೆಹರಿಸಿ ಎಂದು ಒತ್ತಾಯಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ, ಕೆ.ಆರ್. ಮಾರುಕಟ್ಟೆ ಸೇರಿದಂತೆ ಹಲವು ಏರಿಯಾಗಳಲ್ಲಿ ಬೀದಿಬದಿ ವ್ಯಾಪಾರಿಗಳು ಬದುಕು ಕಟ್ಟಿಕೊಂಡಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ ಇದೀಗ ಪಾಲಿಕೆ ಹೈಟೆಕ್ ಸೌಕರ್ಯ ನೀಡಲು ಹೊರಟಿದೆ. ಸರ್ವೆ ನಡೆಸಿರುವ ಪಾಲಿಕೆ, ಈಗ ಆಯ್ದ ಬೀದಿ ಬದಿ ವ್ಯಾಪಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ತಯಾರಿ ನಡೆಸಿದೆ.