ಇಂದು ಬಿಬಿಎಂಪಿ ಬಜೆಟ್, ಅಧಿಕಾರಿಗಳಿಂದ ಆಯವ್ಯಯ ಮಂಡನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಬಹುನಿರೀಕ್ಷಿತ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ.

ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಹೊತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಬಿಬಿಎಂಪಿ ಬಜೆಟ್ ಮಂಡನೆಯಾಗಲಿದೆ.

ಸತತ ನಾಲ್ಕನೇ ಬಾರಿಗೆ ಅಧಿಕಾರಿಗಳೇ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿ ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತರಾಗಿ ನಿಯೋಜನೆಗೊಂಡಿರುವ ಶಿವಾನಂದ ಕಲಕೇರಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.

ಒಟ್ಟಾರೆ 12-13 ಸಾವಿರ ಕೋಟಿ ರೂಪಾಯಿಗಳು ಬಜೆಟ್ ಮಂಡನೆ ಆಗುವ ನಿರೀಕ್ಷೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!