ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣಾ ಘಟಕದ ವಿರುದ್ಧ ಚಾಲಕರು ಮತ್ತು ಕ್ಲೀನರ್ಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ಪರಿಣಾಮವಾಗಿ 5,300 ಆಟೋ ಟಿಪ್ಪರ್‌ಗಳು ಮತ್ತು 700 ಕಸದ ಲಾರಿಗಳ ಸಂಚಾರ ಸ್ಥಗಿತಗೊಂಡು, ನರದಾದ್ಯಂತ ಕಸ ಸಂಗ್ರಹಣೆಗೆ ಅಡಚಣೆ ಉಂಟಾಗಿದೆ.
ಐಪಿಡಿ ಸಾಲಪ್ಪ ವರದಿ ಜಾರಿಗೆಗೊಳಿಸುವುದು ಮತ್ತು ಚಾಲಕರ ಹಾಗೂ ಕ್ಲೀನರ್ಗಳ ಸೇವೆಯನ್ನು ಖಾಯಂಮಾತಿ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಮುಷ್ಕರ ನಡೆಸುತ್ತಿದ್ದಾರೆ. ನೂರಾರು ಪ್ರತಿಭಟನಾಕಾರರು ಬಿಬಿಎಂಪಿ ಮುಖ್ಯ ಕಚೇರಿ ಬಳಿ ಜಮಾಯಿಸಿ, ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಪರಿಸ್ಥಿತಿ ಅರಿತ ಪೊಲೀಸರು, ಮುಂಜಾಗೃತ ಕ್ರಮವಾಗಿ ಕೆಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬಳಿಕ ಸಂಜೆ ವೇಳೆಗೆ ಬಿಡುಗಡೆಗೊಳಿಸಿದ್ದಾರೆ.
ತ್ಯಾಜ್ಯ ಸಂಗ್ರಹ ಚಾಲಕರ ಮತ್ತು ಕ್ಲೀನರ್ ಮುಷ್ಕರಿಂದ ಬೆಂಗಳೂರಲ್ಲಿ ಕಸ ಸಂಗ್ರಹಣೆ ಸ್ಥಗಿತಗೊಂಡಿದೆ. ಇಂದು ಮುಂದುವರಿದಲ್ಲಿ ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಭಾರೀ ಸಮಸ್ಯೆ ಉಂಟಾಗಲಿದೆ. ನಿರಂತರವಾಗಿ ಮೂರು ದಿನ ಮುಷ್ಕರ ಮುಂದುವರಿದರೆ ನಗರದಲ್ಲಿ ಮಾಲೀನ್ಯ ಉಂಟಾಗಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.