ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದ್ದು, ಸಮಗ್ರ ಸಮೀಕ್ಷೆಗೆ ಸಿದ್ಧತೆಗಳ ಆರಂಭಿಸಿದೆ.
1ನೇ ತರಗತಿಯಿಂದ ದ್ವಿತೀಯ ಪಿಯುುಸಿವರೆಗೆ ಒಟ್ಟು 24,000 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ನಿರ್ವಹಿಸುವ ಬಿಬಿಎಂಪಿ ಶಿಕ್ಷಣ ವಿಭಾಗವು ಸಮೀಕ್ಷೆ ನಡೆಸಲು ಖಾಸಗಿ ಸಂಸ್ಥೆಗಳಿಂದ ಟೆಂಡರ್‌ಗಳನ್ನು ಆಹ್ವಾನಿಸಿದೆ. ಸಮೀಕ್ಷೆ ಕುರಿತು ಈ ಹಿಂದೆಯೂ ಬಿಬಿಎಂಪಿ ಟೆಂಡರ್’ಗೆ ಆಹ್ವಾನ ನೀಡಿತ್ತು. ಆದರೆ, ಇದಕ್ಕೆ ಯಾವುದೇ ಪ್ರತಿಕ್ರಿಯೆಗಳು ಬಂದಿರಲಿಲ್ಲ. ಇದೀಗ ಮೂರನೇ ಬಾರಿಗೆ ಟೆಂಡರ್’ಗೆ ಆಹ್ವಾನಿಸಲು ಸಿದ್ಧತೆ ಆರಂಭಿಸಿದೆ.
ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯನ್ನು, ವಿಶೇಷವಾಗಿ ಶಾಲಾ ಮಟ್ಟದಲ್ಲಿ ಗುರುತಿಸುವುದು ಮತ್ತು ಶಾಲೆ ಬಿಡಲು ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳುವುದು ಈ ಸಮೀಕ್ಷೆಯ ಗುರಿಯಾಗಿದೆ. ನಗರಸಭೆಯು ಈಗಾಗಲೇ ಸಮೀಕ್ಷೆಗಾಗಿ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಬಿಬಿಎಂಪಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಮುಖ್ಯ ಆಯುಕ್ತರು ಸಮೀಕ್ಷೆಗಾಗಿ ನೋಡಲ್ ಅಧಿಕಾರಿಯನ್ನು ನೇಮಿಸಿದ್ದಾರೆ ಮತ್ತು ಸೂಚನೆಗಳನ್ನೂ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಕಿರಿಯ ಮತ್ತು ಹಿರಿಯ ಆರೋಗ್ಯ ನಿರೀಕ್ಷಕರನ್ನು ನಿಯೋಜಿಸುವ ಮೂಲಕ ಸಿಬ್ಬಂದಿಗೆ ಸಹಾಯ ಮಾಡುವಂತೆ ಆಯುಕ್ತರು ಬಿಬಿಎಂಪಿಯ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆಂದು ತಿಳಿಸಿದ್ದಾರೆ.
ಪ್ರತಿ ವಾರ್ಡ್‌ಗೆ ಒಟ್ಟು 10 ಜನರನ್ನು ನೇಮಿಸಲಾಗಿದೆ. ಪ್ರತಿಯೊಬ್ಬ ವ್ಯಕ್ತಿಯು ಪ್ರತಿದಿನ 50 ಮನೆಗಳನ್ನು ಸಮೀಕ್ಷೆ ಮಾಡಿ ವರದಿಯನ್ನು ಸಲ್ಲಿಸಬೇಕಿದೆ. ಪುರಸಭಾ ನಿಗಮವು ಸಮೀಕ್ಷೆಯನ್ನು ಪೂರ್ಣಗೊಳಿಸಿ ರಾಜ್ಯ ಶಿಕ್ಷಣ ಇಲಾಖೆಗೆ ವರದಿಯನ್ನು ಸಲ್ಲಿಸಬೇಕು ಎಂದು ಅದಿಕಾರಿಗಳು ಮಾಹಿತಿ ನೀಡಿದ್ದಾರೆ.