ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಮಳೆಯಿಂದಾಗಿ ನಗರದೆಲ್ಲೆಡೆ ಉಂಟಾಗಿರುವ ರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸೂಚನೆ ನೀಡಿದ್ದಾರೆ..
ಪ್ರಮಾಣಿತ ಕಾರ್ಯಾಚರಣೆ ವಿಧಾನ ಅನುಸರಿಸಿರಸ್ತೆ ಗುಂಡಿಗಳನ್ನು ಶೀಘ್ರಗತಿಯಲ್ಲಿ ಮುಚ್ಚುವಂತೆ ಹಾಗೂ ಗುಂಡಿ ಮುಚ್ಚುವ ವಿಚಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು.
ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಪರಿಣಾಮಕಾರಿಯಾಗಿ ರಸ್ತೆ ಗುಂಡಿಗಳನ್ನು ಮುಚ್ಚಲು ಸಮಸ್ಯೆ ಆಗುತ್ತಿದೆ. ಈ ಪೈಕಿ ಮಳೆ ಬೀಳುವ ಸಮಯದಲ್ಲಿ ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಗುಂಡಿಗಳನ್ನು ಯಾವ ರೀತಿ ಮುಚ್ಚಬೇಕು ಎಂಬುದರ ಕುರಿತು ಈಗಾಗಲೇ ತರಬೇತಿ ಮೂಲಕ ಮಾಹಿತಿ ನೀಡಲಾಗಿದ್ದು, ಆಯಾ ವಲಯಗಳಲ್ಲಿ ಯೋಜನೆ ರೂಪಿಸಿಕೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಅಗತ್ಯವಿರುವ ಕಡೆ ಜೆಟ್ ಪ್ಯಾಚರ್‌ಯಂತ್ರ ಬಳಸಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.