ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಚುನಾವಣೆ ಸಂಬಂಧ ವಾರ್ಡ್ ವಿಂಗಡಣೆ, ಮೀಸಲಾತಿ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಿದೆ ಕಾಂಗ್ರೆಸ್ ಪಕ್ಷದವರು ಗೂಂಡಾಗಿರಿ ಸಂಸ್ಕೃತಿ, ತೋಳ್ಬಲ ಪ್ರದರ್ಶಿಸುತ್ತಿರುವು ಖಂಡನೀಯ ಎಂದು ಸಚಿವ ಡಾ ಸಿ.ಎನ್. ಅಶ್ವತ್ಥನಾರಾಯಣ್ ಕಿಡಿ ಕಾರಿದ್ದಾರೆ. ಬೆಂಗಳೂರಿನ ʻಜಗನ್ನಾಥ ಭವನʼದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ವಿಚಾರದಲ್ಲಿ ನಮ್ಮ ಸರ್ಕಾರ ಕಾನೂನಿನ ಪ್ರಕಾರ ಕ್ರಮ ವಹಿಸಿದೆ. ಕಾನೂನು ಉಲ್ಲಂಘನೆ ಆಗಿದ್ದರೆ, ತಕರಾರಿದ್ದರೆ ತೋರಿಸಲಿ ಎಂದು ಸವಾಲು ಹಾಕಿದ್ರು. ಕಾಂಗ್ರೆಸ್‌ನವರಿಗೆ ಚುನಾವಣೆ ಬೇಕಿಲ್ಲ, ಚುನಾವಣೆ ಬೇಡ ಅನ್ನೋದೇ ಅವರ ಉದ್ದೇಶವಾಗಿದೆ, ಚುನಾವಣೆಗೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ ಎಂದರು.
ಕಾಂಗ್ರೆಸ್ ನಾಯಕರಿಗೆ ಸಂವಿಧಾನ, ಕಾನೂನಿನ ವ್ಯವಸ್ಥೆಯ ಅರಿವಿಲ್ಲದಿರುವುದು ದುರಾದಷ್ಟ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಅವರು ಪದೇಪದೇ ನಿವೃತ್ತಿಯ ಹೇಳಿಕೆ ಕೊಡ್ತಾರೆ. 75 ವರ್ಷಕ್ಕಾದರೂ ಅವರು ಇತರರಿಗೆ ಮಾರ್ಗದರ್ಶಿ ಆಗಬೇಕಿತ್ತು. ಜಮೀರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಅವರ ಪ್ರಕಾರ ಮುಸ್ಲಿಂ ಮಹಿಳೆಯರು ಜನಪ್ರತಿನಿಧಿ ಆಗಬಾರದೇ? ಅವರೆಲ್ಲರದ್ದು ರಾಜಕೀಯ ಸ್ಟಂಟ್. ವೇದಿಕೆಗಳನ್ನು ಬಳಸದೆ ಕಾನೂನು ಕೈಗೆ ತೆಗೆದುಕೊಂಡು ಮತ್ತು ಬಾಯಿಗೆ ಬಂದಂತೆ ಮಾತನಾಡಿ ವಿಧಾನಸೌಧದ ಘನತೆಯನ್ನು ಹಾಳು ಮಾಡಿದ್ದು ಖಂಡನೀಯ.
ಮೀಸಲಾತಿ ವಿಚಾರದಲ್ಲೂ ಪುನರ್ ಪರಿಶೀಲನೆ ಅನಿವಾರ್ಯವಾಗಿತ್ತು. 243 ಸದಸ್ಯ ಸಂಖ್ಯೆ ಅನುಗುಣವಾಗಿ ಸಮಿತಿ ರಚಿಸಿ ಮೀಸಲಾತಿ ನಿಗದಿ ಮಾಡಲಾಗಿದೆ.ಶೇಕಡಾ 50ರಷ್ಟು ಓಬಿಸಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಟ್ಟಿದೆ. ಮಹಿಳೆಯರಿಗೆ ಶೇ 50 ಮೀಸಲಾತಿ ಕೊಟ್ಟಿದೆ. ಇದಕ್ಕೆ ವಿರೋಧ, ಆಕ್ಷೇಪಣೆ ಇದ್ದರೆ ಅದಕ್ಕೆ ಅವಕಾಶವಿದೆ, ಅದು ಬಿಟ್ಟು ಈ ರೀತಿಯ ಗೂಂಡಾ ವರ್ತನೆ ಸರಿಯಲ್ಲಿ ಎಂದು ಆಕ್ರೋಶ ಹೊರಹಾಕಿದ್ರು.