ಬಿಬಿಎಂಪಿ ಅಗ್ನಿ ಅವಘಡ: ಮೂವರ ವಿರುದ್ಧ ಎಫ್​ಐಆರ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಬಿಎಂಪಿಯ ಚೀಫ್ ಎಂಜಿನಿಯರ್ ಪ್ರಹ್ಲಾದ್ ನೀಡಿರುವ ದೂರಿನ ಮೇರೆಗೆ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್​ಗಳಾದ ಆನಂದ್, ಸ್ವಾಮಿ ಹಾಗೂ ಡಿ ಗ್ರೂಪ್ ನೌಕರ ಸುರೇಶ್ ವಿರುದ್ಧ ಐಪಿಸಿ ಸೆಕ್ಷನ್ 337, 338 ಅಡಿ ನಿರ್ಲಕ್ಷ್ಯತನ ವಹಿಸಿದ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನು ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!