Tuesday, October 3, 2023

Latest Posts

ಬಿಬಿಎಂಪಿ ಅಗ್ನಿ ಅವಘಡ: ಎಫ್‌ಐಆರ್ ದಾಖಲು, ಗಾಯಾಳುಗಳ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ. ಪ್ರಹ್ಲಾದ್ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ಘಟನೆ ಸ್ಥಳದಲ್ಲಿದ್ದ ಮೂವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದು, ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆಸ್ಪತ್ರೆಯಲ್ಲಿ ಇರುವ ಒಂಬತ್ತು ಮಂದಿಗೆ ಶೇ. 35-40ರಷ್ಟು ಸುಟ್ಟ ಗಾಯಗಳಾಗಿವೆ. ಅವರ ಆರೋಗ್ಯ ಸ್ಥಿತಿ ಗಂಭೀರಾವಗಿದೆ ಎಂದು ಹೇಳಲಾಗಿದೆ.

ಇದೀಗ ಆರೋಗ್ಯ ಸ್ಥಿರವಾಗಿದೆ. ಆದರೆ ಮುಂದಿನ 48 ಗಂಟೆಗಳ ಕಾಲ ಯಾವುದನ್ನೂ ಖಚಿತ ಪಡಿಸಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಒಂಬತ್ತು ಜನರಲ್ಲಿ ಮೂವರಿಗೆ ಮುಖದ ಮೇಲೂ ಸುಟ್ಟ ಗಾಯಗಳಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!