ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಕ್ವಾಲಿಟಿ ಕಂಟ್ರೋಲ್ ವಿಭಾಗದ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಇತರೆ ಗಾಯಾಳುಗಳ ಆರೋಗ್ಯ ಸ್ಥಿತಿ ಉತ್ತಮವಾಗಿದೆ. ಆದರೆ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಗಾಯಾಳುಗಳಿಗೆ ಮುಖ ಹಾಗೂ ಕೈಗಳಿಗೆ ಸುಟ್ಟ ಗಾಯಗಳಾಗಿದೆ, ಆದರೆ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡಿದ್ದು, ಆಹಾರ ಸೇವನೆ ಮಾಡುತ್ತಿದ್ದಾರೆ.