ರಾಜಕಾಲುವೆ ಮೇಲಿನ ಕಟ್ಟಡಗಳ ನೆಲಸಮಕ್ಕೆ ಡೆಡ್ ಲೈನ್ ಕೊಟ್ಟ ಬಿಬಿಎಂಪಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳನ್ನು ಒತ್ತುವರಿ ಮಾಡಿದ ಜಾಗದಲ್ಲಿ ನಿರ್ಮಾಣ ಮಾಡಲಾದ ಎಲ್ಲ ಕಟ್ಟಡಗಳನ್ನು ನವೆಂಬರ್ 15ರೊಳಗೆ ತೆರವುಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪಾಲಿಕೆ ವ್ಯಾಪ್ತಿಯ ಎಲ್ಲ ತಹಸೀಲ್ದಾರರು ಹಾಗೂ ಪಾಲಿಕೆ ಅಧಿಕಾರಿಗಳುಗೆ ಖಡಕ್ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯದ ತಹಶಿಲ್ದಾರ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಮೊದಲಿಗೆ ಇಂದಿನಿಂದ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ನವೆಂಬರ್ 15ರೊಳಗೆ ತೆರವುಗೊಳಿಸಲು ಎಲ್ಲಾ ವಲಯ ಆಯುಕ್ತರಿಗೆ ನಿರ್ದೇಶಿಸಿದರು.

ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡದಿದ್ದರೆ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು. ಕೆರೆ ಒತ್ತುವರಿ ಸಂಬಂಧಿಸಿದಂತೆ ಮಾತನಾಡಿ ತಕ್ಷಣವೇ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ ದಾಖಲೆ ಬಂದ ತಕ್ಷಣ ಖಾಸಗಿ ಅಥವಾ ಸಾರ್ವಜನಿಕವಾಗಿ ಕೆರೆ ಒತ್ತುವರಿ ಕಂಡುಬಂದಲ್ಲಿ ಕೂಡಲೇ ತೆರವು ಗೊಳಿಸುವ ಕಾರ್ಯ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!