ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ನಾಗರಿಕರಿಗೆ ನೋಟಿಸ್ ನೀಡುವ ಮೂಲಕ ಕಠಿಣ ಕ್ರಮಕ್ಕೆ ಮುಂದಾಗಿದೆ.
ಬಿಬಿಎಂಪಿ ನೋಟಿಸ್ ನೀಡಿರುವ ಪೈಕಿ ವಿಧಾನಸೌಧ, ವಿಕಾಸ ಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಚೇರಿಗಳು ಕೂಡ ಒಳಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಖಾಸಗಿ ಆಸ್ತಿಗಳಿಗೆ ನೀಡುವಂತೆಯೇ ಸರ್ಕಾರಿ ಆಸ್ತಿಗಳಿಗೂ ಕೂಡ ತೆರಿಗೆ ಬಾಕಿ ಪಾವತಿಗೆ ನೋಟಿಸ್ ನೀಡಲಾಗುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದು, ತೆರಿಗೆ ಬಾಕಿ ಮುಂದುವರಿಯುತ್ತಲೇ ಇದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.
ವಿದ್ಯುತ್ ಕಚೇರಿಗಳು ಮತ್ತು ಸರ್ಕಾರಿ ಕಚೇರಿಗಳು ಬಾಕಿ ಇರಿಸಿಕೊಂಡಿರುವ ಆಸ್ತಿ ತೆರಿಗೆಯ ಒಟ್ಟು ಮೊತ್ತದ ಬಗ್ಗೆ ನಿಖರವಾದ ಮಾಹಿತಿ ಇಲ್ಲದಿದ್ದರೂ, ವರ್ಷಗಳಿಂದ ತೆರಿಗೆಗಳು ಪಾವತಿಯಾಗದೆ ಒಟ್ಟು ಮೊತ್ತವು ಕೋಟಿಗಳಷ್ಟಿದೆ ಎಂದು ಮೂಲಗಳು ಅಂದಾಜಿಸಿವೆ.