ಬಿಬಿಎಂಪಿ ಪಬ್ಲಿಕ್ ಸ್ಕೂಲ್ ಪ್ರವೇಶಾತಿ : ಮಾ.27ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಭಾರತೀಯ ವಿದ್ಯಾಭವನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಂಟಿ ಆಯೋಗದಲ್ಲಿ ನಡೆಯುತ್ತಿರುವ ಫ್ರೀ ನರ್ಸರಿ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ) ಗೆ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತೀಯ ವಿದ್ಯಾಭವನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಬ್ಲಿಕ್ ಸ್ಕೂಲ್, ನಂ. 215ನೇ ಮುಖ್ಯ ರಸ್ತೆ ಕ್ರಾಂತಿಕವಿ ಸರ್ವಜ್ಞ ರಸ್ತೆ, ಶ್ರೀರಾಮಪುರ, ಬೆಂಗಳೂರು-21 ಈ ವಿದ್ಯಾಸಂಸ್ಥೆಯಲ್ಲಿ ಶಿಶುವಿಹಾರಕ್ಕೆ ಮಾರ್ಚ್‌ 27,2023 ರಿಂದ ಏಪ್ರಿಲ್ 10,2023 ರೊಳಗೆ ಅರ್ಜಿಗಳನ್ನು ಪಡೆಯಬಹುದು.

ಅರ್ಜಿ ನಮೂನೆಗಳನ್ನು ಏಪ್ರಿಲ್‌ 11,2023 ರಿಂದ ಏಪ್ರಿಲ್ 25,2023ರೊಳಗೆ ಸಲ್ಲಿಸಬೇಕಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ(ಶಿಕ್ಷಣ) 1ನೇ ಮಹಡಿಯ ಅನೆಕ್ಸ್- 3 ಕಟ್ಟಡ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು. ಏಪ್ರಿಲ್‌ 29,2023 ರಂದು ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲನೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!