ಹೊಸದಿಗಂತ ಡಿಜಿಟಲ್ ಡೆಸ್ಕ್ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 3673 ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜನವರಿ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಈ ಹುದ್ದೆಗಳಿಗೆ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇಮಕಾತಿಯ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 28,950/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.