ವಿಜ್ಞಾನಿಗಳ ತಂಡ ರಚನೆ: ಯೋಜನಾ ವರದಿ ನೀಡಲು ಕೃಷಿ ವಿವಿಗಳಿಗೆ ಸೂಚಿಸಿದ ಸಚಿವ ಬಿ.ಸಿ.ಪಾಟೀಲ್

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಕೃಷಿಯಲ್ಲಿ ಡೋನ್ ತಂತ್ರಜ್ಞಾನ ಬಳಕೆ ಸೇರಿದಂತೆ ಕೀಟನಾಶಕ, ಲಘು ಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ , ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು ಅಭಿವೃದ್ಧಿ ಪಡಿಸಿ, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕಾಗಿದೆ. ಇದಕ್ಕಾಗಿ ವಿಜ್ಞಾನಿಗಳ ತಂಡಗಳನ್ನು ರಚಿಸಲು ಕೃಷಿ ವಿಶ್ವವಿದ್ಯಾಲಯಗಳು ಯೋಜನಾ ವರದಿ ನೀಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

ವಿಕಾಸಸೌಧಲ್ಲಿ ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಉನ್ನತಾಧಿಕಾರದ ಸಮಿತಿಯ ಸಭೆಯನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ತಾಂತ್ರಿಕತೆಗಳನ್ನು ಮೂಲಕ ಅನುಕೂಲವಾಗುವಂತೆ ಅಭಿವೃದ್ಧಿಪಡಿಸುವ ಬಗ್ಗೆ ಪರಿಶೀಲನಾ ಸಭೆ ನಡೆಯಿತು.

ರೈತರ ಆದಾಯ ದ್ವಿಗುಣಗೊಳಿಸಲು ಸೆಕೆಂಡರಿ ಕೃಷಿಗೆ ಒತ್ತು ನೀಡುವುದರ ಜೊತೆಗೆ, ಸೆಕೆಂಡರಿ ಕೃಷಿ ಕುರಿತು ರಾಜ್ಯದ ಎಲ್ಲಾ ಕೃಷಿ ವಿಶ್ವ ವಿದ್ಯಾಲಯಗಳಲ್ಲಿರುವ ನೂತನ ತಾಂತ್ರಿಕತೆಗಳನ್ನು ಒಂದೇ ಸೂರಿನಡಿ ರೈತರಿಗೆ ಲಭ್ಯವಾಗುವಂತೆ ಮಾಹಿತಿ / ತರಬೇತಿ ನೀಡಲು ತಿಳಿಸಲಾಯಿತು. ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಲಭ್ಯವಿರುವ ರೈತಸ್ನೇಹಿ ಆದಾಯ ಹೆಚ್ಚಿಸುವ ಸಂಶೋಧನೆಗಳನ್ನು ತಂತ್ರಾಂಶದಲ್ಲಿ ಅಳವಡಿಸಿ ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು, ಅಭಿವೃದ್ಧಿಪಡಿಸಿರುವ ಬೆಳೆಗಳ ತಳಿಗಳನ್ನು ಹಾಗೂ ಉತ್ತಮ ತಾಂತ್ರಿಕತೆಗಳ ಕುರಿತು ವ್ಯಾಪಕ ಪ್ರಚಾರ ನೀಡುವುದು . ಕೃಷಿ ಇಲಾಖೆಯು ಕೃಷಿ ವಿಶ್ವ ವಿದ್ಯಾಲಯಗಳು ಅಭಿವೃದ್ಧಿಪಡಿಸಿರುವ ಉತ್ತಮ ತಳಿಗಳನ್ನು ಸಹಾಯಧನ ಕಾರ್ಯಕ್ರಮದಡಿ ತರಲು ಕ್ರಮವಹಿಸಲು ವಿವಿಧ ಸೂಚಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಕೃಷಿ ತೋಟಗಾರಿಕೆ / ಪಶುಸಂಗೋಪನಾ ವಿಶ್ವವಿದ್ಯಾಲಯಗಳ ಹಾಗೂ ಕೃಷಿ ಕುಲಪತಿಗಳು, ಆಯುಕ್ತರು, ನಿರ್ದೇಶಕರು, ಕೃಷಿ ಪಂಡಿತ ಪ್ರಶಸ್ತಿ ವಿಜೇತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!