ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಒಂದು ವಾರದ ಹಿಂದೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಬಿಸಿಎ ಓದುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಳು.
ಹಾವೇರಿ ಜಿಲ್ಲೆಯಶಿಗ್ಗಾಂವಿ (Shiggaon) ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ (22) ಮೃತ ಯುವತಿ. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯೊಂದರ ಮಾಲೀಕ ರಂಜಾನ್ ನದಾಫ್ ಕಿರುಕುಳ ನೀಡಿದ ಆರೋಪಿ.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದಳು. ನವೀನ್ ಎಂಬ ಯುವಕನನ್ನು ಶಿಲ್ಪಾ ಪ್ರೀತಿಸುತ್ತಿದ್ದಳು. ನವೀನ್ ಆರೋಪಿ ರಂಜಾನ್ ನದಾಫ್ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿ ರಂಜಾನ್ ನದಾಫ್ ಮೃತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡಿದ್ದನಂತೆ. ಈತನ ಕಿರುಕುಳಕ್ಕೆ ಬೇಸತ್ತು ಶಿಲ್ಪಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.