ಟೆಸ್ಟ್‌ ಪಂದ್ಯಕ್ಕೂ ಮುನ್ನ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಬಿಸಿಸಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯಗಳು ಶುಕ್ರವಾರದಿಂದ ಪ್ರಾರಂಭವಾಗಲಿದ್ದು, ಈ ವೇಳೆ ಬಿಸಿಸಿಐ ಕ್ರೀಡಾಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.
ಮೊಹಾಲಿಯಲ್ಲಿ ಭಾರತ ಶ್ರೀಲಂಕಾ ನಡುವೆ ನಡೆಯಲಿರುವ ಮೊದಲ ಪಂದ್ಯಕ್ಕೆ ಶೇ.50ರಷ್ಟು ವೀಕ್ಷಕರು ಬರಲು ಅನುಮತಿ ನೀಡಿದೆ.
ಕಿಂಗ್ ಕೊಹ್ಲಿ ಅವರ 100ನೇ ಟೆಸ್ಟ್ ಪಂದ್ಯವನ್ನು ಸ್ಟೇಡಿಯಂ ನಲ್ಲೇ ವೀಕ್ಷಿಸಬೇಕು ಎಂಬ ಅಭಿಮಾನಿಗಳ ಕೂಗಿಗೆ ಬಿಸಿಸಿಐ ಸ್ಪಂದಿಸಿದೆ. ಕಿಂಗ್ ಕೊಹ್ಲಿ ಮಹತ್ವದ ಪಂದ್ಯವನ್ನು ಅಭಿಮಾನಿಗಳು ಸ್ಟೇಡಿಯಂನಲ್ಲೇ ವೀಕ್ಷಿಸಬಹುದಾಗಿದೆ.
ಈ ಹಿಂದೆ ಕೊರೋನಾ ಮತ್ತು ಪಂಜಾಬ್ ಚುನಾವಣೆ ಮತ ಎಣಿಕೆ ಟೆಸ್ಟ್ ಪಂದ್ಯಕ್ಕೆ ವೀಕ್ಷಕರಿಗೆ ಅನುಮತಿ ನೀಡಿರಲಿಲ್ಲ. ಆದರೆ ಟಿ20 ನಂತರ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ಗೆ ಪ್ರೇಕ್ಷಕರಿಗೆ ಬರಲು ಅವಕಾಶ ನೀಡಲಾಗಿತ್ತು. ಈ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಮಣಿದ ಬಿಸಿಸಿಐ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವುದಾಗಿ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಒಪ್ಪಿಗೆ ನೀಡಿದೆ ಎಂದು ಮಂಡಳಿಯ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.
ಮಾರ್ಚ್ 4 ರಿಂದ ಮೊಹಾಲಿಯಲ್ಲಿ ಟೆಸ್ಟ್ ಪಂದ್ಯ ನಡೆಯಲಿದೆ. ಇದು ವಿರಾಟ್ ಕೊಹ್ಲಿ ಅವರ 100 ಟೆಸ್ಟ್ ಪಂದ್ಯವಾಗಿದ್ದು, 100 ಪಂದ್ಯಗಳನ್ನಾಡುವ 12ನೇ ಭಾರತೀಯ ಕ್ರಿಕೆಟರ್ ಎನಿಸಿಕೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!